Bengaluru 27°C

ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ತೀವ್ರವಾದ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ತೀವ್ರವಾದ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ ಇಂದು ಸಿಎಂ ಅವರ ಚಿಕ್ಕಬಳ್ಳಾಪುರ ಹಾಗೂ ರಾಮನಗರ ಪ್ರವಾಸ ಕಾರ್ಯಕ್ರಮ ನಿಗದಿಯಾಗಿತ್ತು. ಅವೆಲ್ಲವನ್ನೂ ಈಗ ರದ್ದುಪಡಿಸಲಾಗಿದೆ.


ಮಂಡಿನೋವು ಹೊರತುಪಡಿಸಿದಂತೆ ಸಿಎಂ ಸಿದ್ದರಾಮಯ್ಯ ಆರೋಗ್ಯವಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಇಂದು ತಪಾಸಣೆ ನಡೆಸಲಿರುವ ವೈದ್ಯರು ಬಳಿಕ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದ್ದಾರೆ.


Nk Channel Final 21 09 2023