Bengaluru 21°C
Ad

ಎಫ್‌ಐಆರ್ ಆದ ತಕ್ಷಣ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಆರ್. ಅಶೋಕ್

ಎಫ್‌ಐಆರ್ ಆದ ತಕ್ಷಣ ಸಿಎಂ ರಾಜೀನಾಮೆ ಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಬೆಂಗಳೂರು: ಎಫ್‌ಐಆರ್ ಆದ ತಕ್ಷಣ ಸಿಎಂ ರಾಜೀನಾಮೆ ಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಮುಡಾ ಹಗರಣ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಬೆನ್ನಲ್ಲೇ ಜಯನಗರದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಮಹತ್ತರ ತಿರುವಿನ ದಿನವಾಗಿದೆ. ರಾಜ್ಯದ ಆಡಳಿತ ನಡೆಸುವ ಮುಖ್ಯಮಂತ್ರಿ ಮೇಲೆ ಆಪಾದನೆ ಬಂದು ಹೈಕೋರ್ಟ್ ಆದೇಶ ಆಗಿದೆ. ಜನ ಪ್ರತಿನಿಧಿಗಳ ಕೋರ್ಟ್ ಎಫ್‌ಐಆರ್ ಆಗಲಿ ಎಂದು ಹೇಳಿದೆ ಎಂದರು.

ರಾಜಭವನವನ್ನು ಬಾಂಗ್ಲಾದೇಶದ ಮಾದರಿಯಲ್ಲಿ ಸ್ಫೋಟಿಸುತ್ತೀವಿ ಎಂದು ಕಾಂಗ್ರೆಸ್ ಅವರು ವಿಜೃಂಭಣೆ ಮಾಡಿದ್ದರು. ಈಗ ತನಿಖೆಗೆ ಸೂಕ್ತ ಎಂದು ಆದೇಶ ಆಗಿದೆ ಎಂದು ಹೇಳಿದರು. ಒರಿಜಿನಲ್ ಕೇಸ್ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಇತ್ತು. ಈಗ ಜನಪ್ರತಿನಿಧಿಗಳ ನ್ಯಾಯಾಲಯ ಸ್ಟೇಟ್‌ಮೆಂಟ್ ಕೊಟ್ಟಿದೆ. ಗರ್ವನರ್ ಹೇಳಿದ್ದರಲ್ಲಿ ಸತ್ಯಾಂಶ ಕಾಣುತ್ತಿದೆ ಎಂದು ಕೋರ್ಟ್ ಹೇಳಿದೆ.

ಸಿದ್ದರಾಮಯ್ಯ ಅವರು ಇನ್ನೂ ಯಾವುದಕ್ಕೇ ಕಾಯುತ್ತಿದ್ದಾರೆ. ಬಿಜೆಪಿ ಕೇಸ್ ಹಾಕಿಲ್ಲ. ಕೇಸ್ ಹಾಕಿರುವುದು ಆರ್‌ಟಿಐ ಕಾರ್ಯಕರ್ತರು. ಬಿಜೆಪಿಯದ್ದು ಸೇಡಿನ ರಾಜಕಾರಣ. ಗರ್ವನರ್ ಅವರು ಬಿಜೆಪಿ ಕೇಂದ್ರ ಎಂದಿದ್ದರು. ಈಗ ಎರಡೂ ನ್ಯಾಯಾಲಯ ಹೇಳಿದೆ ಏನು ಹೇಳುತ್ತಿರಾ ಎಂದು ಪ್ರಶ್ನಿಸಿದರು.

 

Ad
Ad
Nk Channel Final 21 09 2023