News Karnataka Kannada
Saturday, May 18 2024
ಬೆಂಗಳೂರು

ಆಗಸ್ಟ್‌ 3ರಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದು

Cm Sidhu to meet PM on August 3
Photo Credit : News Kannada

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಮಳೆ ಹಾನಿ ಸಮೀಕ್ಷೆ ನಡೆಸಿದ್ದು, ಆಗಸ್ಟ್ 3ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

ಮೇ ತಿಂಗಳಲ್ಲಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿಯವರೊಂದಿಗೆ ಇದು ಮೊದಲ ಭೇಟಿಯಾಗಿದೆ.

ಭಾರತೀಯ ಆಹಾರ ನಿಗಮ ರಾಜ್ಯಕ್ಕೆ ಅಕ್ಕಿ ನಿರಾಕರಿಸುವುದು ಸೇರಿದಂತೆ ಹಲವು ವಿಷಯಗಳನ್ನು ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳ ಜತೆ ಪ್ರಸ್ತಾಪಿಸುವ ನಿರೀಕ್ಷೆಯಿದೆ. ಅದೇ ದಿನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೂಡ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳ ಸ್ಥಿತಿಗತಿ ಕುರಿತು ಚರ್ಚೆ ನಡೆಸಲಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು