Bengaluru 26°C
Ad

ಮುಂಗಾರು ಕೃಷಿ ಚಟುವಟಿಕೆ ಕುರಿತು ಜಿಲ್ಲಾಧಿಕಾರಿಗಳ ಜೊತೆ ಸಿಎಂ ಚರ್ಚೆ

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು,

ಬೆಂಗಳೂರು: ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬರ ನಿರ್ವಹಣೆ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ಈಗಾಗಲೇ ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ ಮೇ ತಿಂಗಳಲ್ಲಿ 295 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ರದ ಗುರಿ ಇತ್ತು. 68,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ ಇನ್ನೂ 13 ದಿನ ಬಾಕಿಯಿದೆ ಜೂನ್ 6 ರವರೆಗೆ ನೀತಿ ಸಂಹಿತ ಜಾರಿಯಲ್ಲಿದೆ ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು ಎಲ್ಲ ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು ಎಂದರು.

ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ ಕ್ರಮ ಕೈಗೊಳ್ಳಬೇಕು ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಕೆ ಸಾಲುಹುಂಡಿ ಗ್ರಾಮಗಳಲ್ಲಿ ಕಾಲರಾ ಕಂಡುಬಂದಿದೆ ಕಲುಷಿತ ನೀರು ಕುಡಿದು ಕಾಲರಾ ಉಂಟಾಗಿದೆ’ ಸಂಬಂಧಪಟ್ಟ ಎಂಜಿನಿಯರುಗಳು ಕುಡಿಯಲು ಯೋಗ್ಯ ನೀರು ಒದಗಿಸುವಲ್ಲಿ ವಿಫಲವಾಗಿದ್ದಾರೆ ಕುಡಿಯುವ ನೀರಿನ ಮೂಲ ಕುಡಿಯಲು ಯೋಗ್ಯವಾಗಿದೆಯೇ ಇಲ್ಲವೇ ಎಂದು ಪರಿಶೀಲಿಸದೆ ಇರುವುದು ದೊಡ್ಡ ಅಪರಾಧ ಕೆ ಸಾಲುಯಂಡಿಯಲ್ಲಿ 40ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ ಒಬ್ಬ ಯುವಕ ಮೃತಪಟ್ಟಿದ್ದಾನೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗಿರುವುದು ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಹೇಳಿದ್ದಾರೆ.

Ad
Ad
Nk Channel Final 21 09 2023
Ad