Bengaluru 23°C
Ad

ಕರಾವಳಿ ಜಿಲ್ಲೆ, ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad
300x250 2

ಜೂನ್ 13ರ ವರೆಗೂ ರಾಜ್ಯದ ಹಲವೆಡೆ ಗುಡುಗು ಸಹಿತ ಬಿರುಗಾಳಿ ಬೀಸಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದ್ದು ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಚಂಡಮಾರುತದ ಹವಾಮಾನವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೆೇಗದಲ್ಲಿ 65 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಸಲಾಗಿದೆ.

Ad
Ad
Nk Channel Final 21 09 2023
Ad