ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿಯ ‘ಎಕ್ಸ್’ ಖಾತೆಗೆ ಭಾರತದಲ್ಲಿ ನಿರ್ಬಂಧ ಹೇರಲಾಗಿದೆ. ಈ ಕುರಿತು ಪ್ರತಿಯಿಸಿರುವ ಸಿಜೆಪಿ ಸಂಸ್ಥಾಪಕ ಅಭಿಷೇಕ್ ದಿಪ್ಕೆ, ‘ನಿರೀಕ್ಷೆಯಂತೆ ಭಾರತದಲ್ಲಿ ಕಾಕ್ರೋಚ್ ಜನತಾ ಪಕ್ಷದ ಖಾತೆಯನ್ನು ನಿರ್ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯುವಜನರ ಬಗ್ಗೆ ನೀಡಿದ ಹೇಳಿಕೆಗೆ ಪ್ರತಿಯಾಗಿ ಕಾಕ್ರೋಚ್ ಜನತಾ ಪಕ್ಷ ಎಂಬ ಚಳವಳಿಯನ್ನು ಅಭಿಷೇಕ್ ದಿಪ್ಕೆ ಆರಂಭಿಸಿದ್ದರು.

ಇದೀಗ ಕೇವಲ ಐದು ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ 10 ಮಿಲಿಯನ್ ಫಾಲೋವರ್ಸ್‌ಗಳನ್ನು ದಾಟಿದೆ. ಆ ಮೂಲಕ ಭಾರತೀಯ ಜನತಾ ಪಕ್ಷದ ಇನ್‌ಸ್ಟಾಗ್ರಾಂ ಫಾಲೋವರ್‌ಗಳನ್ನು ಹಿಂದಿಕ್ಕಿದೆ. ಬಿಜೆಪಿಯು ಸದ್ಯ 8.7 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದೆ.