ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ದಿಢೀರ್ ಆಗಿ 4 ರೂಪಾಯಿ ಏರಿಕೆ ಮಾಡಿದ ಬೆನ್ನಲ್ಲೇ ಹೊಟೇಲ್ ಮಾಲೀಕರ ಸಂಘವು ಕಾಫಿ ಮತ್ತು ಟೀ ದರ ಏರಿಕೆ ಮಾಡಿದ್ದಾರೆ.

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ಸಂಪುಟ ಸಭೆಯಲ್ಲಿ 4 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ದರ ಏರಿಕೆಯಾದ ಹಿನ್ನಲೆ ಬೆಂಗಳೂರು ಹೊಟೇಲ್ ಮಾಲೀಕರ ಸಂಘವು ಕಾಫಿ ಮತ್ತು ಟೀ ದರವನ್ನು 2-3 ರೂಪಾಯಿಗಳಷ್ಟು ಹೆಚ್ಚಿಸುವ ತೀರ್ಮಾನಕ್ಕೆ ಬಂದಿದೆ.

ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ ನಂದಿನಿ ಹಾಲಿನ ದರ ಹೆಚ್ಚಳ ಮಾಡಿ ಆ ಹಣವನ್ನು ರೈತರಿಗೆ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಪದೇ ಪದೇ ಹಾಲಿನ ಬೆಲೆಯ ಜೊತೆ ಟೀ, ಕಾಫಿ ಬೆಲೆ ಏರಿಕೆಯಿಂದಾಗಿ ರಾಜ್ಯದ ಜನರಿಗೆ ದೊಡ್ಡ ಹೊಡೆತ ಬಿದ್ದಿದೆ.