ಮೃತಪಟ್ಟ ಕೆಎಸ್ಆರ್‌ಟಿಸಿ ನೌಕರರ ಕುಟುಂಬಕ್ಕೆ ಪರಿಹಾರ ವಿತರಣೆ

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಕೆಎಸ್​ಆರ್​ಟಿಸಿ ನೌಕರರ ಕುಟುಂಬದ ಸದಸ್ಯರನ್ನು ಹೊಸ ವರ್ಷದ ಅಂಗವಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಗೌರವಿಸಿದರು. ಅಲ್ಲದೆ, ಅಪಘಾತದಲ್ಲಿ ಮೃತಪಟ್ಟ ಮೂವರು ಸಿಬ್ಬಂದಿಯ ಅವಲಂಬಿತ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಣೆ ಮಾಡಿದರು.

ಕಳೆದ ಒಂದು ವರ್ಷದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಒಟ್ಟು 12 ಸಿಬ್ಬಂದಿಯ ಅವಲಂಬಿತರಿಗೆ ತಲಾ 1 ಕೋಟಿ ರೂ. ಪರಿಹಾರದ ಮೊತ್ತವನ್ನು ಪಾವತಿಸಲಾಗಿದೆ.

ಪುತ್ತೂರು ವಿಭಾಗದ ಧರ್ಮಸ್ಥಳ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಅಶೋಕ್ ಕುಮಾರ್,ಮೈಸೂರು ವಿಭಾಗದ ವಿಜಯನಗರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಬಿ.ಎಂ ಪುಟ್ಟಸ್ವಾಮಿ ಹಾಗು ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-5ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ-ಕಂ-ನಿರ್ವಾಹಕ ರಮೇಶ ಜಿ. ಅವರು ಮೃತಪಟ್ಟವರು.

ಮೃತ ಅವಲಂಬಿತರ ಕುಟುಂಬದವರಿಗೆ ಸೀರೆ ಮತ್ತು ಸಿಹಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ಮನೆಯ ಸದಸ್ಯನನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು ನಾವು ಮಾಡುತ್ತಿದ್ದೇವೆ. ಕೋಟಿ ಹಣದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು‌ ನಡೆಸಬಹುದಾಗಿದೆ ಎಂದರು.

ಪರಿಹಾರ ವಿತರಣೆ ಹಾಗೂ ಗೌರವ ಸಲ್ಲಿಕೆ ಸಮಾರಂಭದಲ್ಲಿ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕರು (ಸಿ ಮತ್ತು ಜಾ) ಡಾ. ನಂದಿನಿ ದೇವಿ ಕೆ., ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬ ವರ್ಗ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Ashika S

Recent Posts

ಅಮೆರಿಕದ ವೈಟ್ ಹೌಸ್ ನಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ

ಅಮೆರಿಕದ ವೈಟ್ ಹೌಸ್ ನಲ್ಲಿ ಆಯೋಜಿಸಲಾಗಿದ್ದ ಏಷಿಯನ್‌ ಅಮೆರಿಕನ್‌, ಸ್ಥಳೀಯ ಹವಾಯಿಯನ್‌ ಮತ್ತು ಪೆಸಿಫಿಕ್‌ ಐಲ್ಯಾಂಡರ್‌ ಪಾರಂಪರ್ಯ ಮಾಸಾಚರಣೆ ಕಾರ್ಯಕ್ರಮದಲ್ಲಿ…

9 mins ago

ವಿಮಾನದಲ್ಲಿ ಪ್ರಯಾಣಿಕರ ಬ್ಯಾಗ್​ನಿಂದ ಬೆಲೆಬಾಳುವ ವಸ್ತು ಕಳ್ಳತನ: ಆರೋಪಿಗಳು ವಶಕ್ಕೆ

ವಿಮಾನಗಳಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರ ಕೈ ಚೀಲಗಳಿಂದ ಚಿನ್ನಾಭರಣ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು…

11 mins ago

ಮಕ್ಕಳ ಗೌಪ್ಯತೆ ಕಾಪಾಡಿದ್ದಕ್ಕೆ ಪಾಪ್ಸ್‌ಗೆ ದುಬಾರಿ ಗಿಫ್ಟ್ ಹ್ಯಾಂಪರ್ ಕೊಟ್ಟ ವಿರುಷ್ಕಾ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ತಮ್ಮ ಮಕ್ಕಳ ಗೌಪ್ಯತೆ ಕಾಪಾಡಿಕೊಂಡು ಬಂದಿರುವುದರ ಗೌರವಾರ್ಥ ಪಾಪಾರಾಜಿಗಳಿಗೆ ದುಬಾರಿ ಉಡುಗೊರೆ…

28 mins ago

ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಗೆ ಬೆಂಕಿ

ಕೇಂದ್ರ ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಯ ನಾಲ್ಕನೇ ಮಹಡಿಯಲ್ಲಿ ಇಂದು ದಿಢೀರನೆ ಬೆಂಕಿ ಕಾಣಿಸಿಕೊಂಡಿದೆ.

33 mins ago

ಮತದಾರನಿಗೆ ಹೊಡೆಯಲು ಹೋಗಿ ಕಪಾಳಕ್ಕೆ ಹೊಡಿಸಿಕೊಂಡ ಶಾಸಕ; ವಿಡಿಯೋ ವೈರಲ್‌

ಕಳೆ ದಿನ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಿತು. ಈ ವೇಳೆ ಆಡಳಿತಾರೂಢ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ಮತದಾರನ ಮೇಲೆ ಹಲ್ಲೆ…

46 mins ago

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ…

50 mins ago