News Karnataka Kannada
Thursday, May 02 2024
ಬೆಂಗಳೂರು

ಹುಲಿ ಉಗುರು ಬಳಕೆ ವಿಚಾರ: ಜಗ್ಗೇಶ್​ ವಿರುದ್ಧ ದೂರು ದಾಖಲು

Complaint filed against Jaggesh for using tiger claws
Photo Credit : News Kannada

ಬೆಂಗಳೂರು: ಕಳೆದ ಒಂದು ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ನಟ ಜಗ್ಗೇಶ ಅವರು ಹುಲಿ ಉಗುರು ಲಾಕೆಟ್​​​​ ಧರಿಸಿರುವ ವಿಡಿಯೋ ವೈರಲ್​ ಆಗುತ್ತಿದೆ.

ಈ ಸಂಬಂಧ ನಟ ಜಗ್ಗೇಶ್​ ವಿರುದ್ಧ ಕಾಂಗ್ರೆಸ್​ನ ಮಾಜಿ ಎಂಎಲ್​ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ.

ನಟ ಜಗ್ಗೇಶ್ ಹುಲಿ ಉಗುರು ಧರಿಸಿರುವ ಮತ್ತು ಇದು ಒರಿಜಿನಲ್​ ಅಂತ ಅವರೇ ಹೇಳಿಕೊಂಡಿರುವ ವೀಡಿಯೋವನ್ನು ಹಲವರು ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಈ ವಿಡಿಯೋವನ್ನು ನೋಡಿದ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದಿದ್ದಾರೆ. ಇದರಿಂದ ಸಂಸದ ಜಗ್ಗೇಶ್​ಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು