Bengaluru 27°C

ವಾಹನ ಸವಾರರ ಗಮನಕ್ಕೆ: ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ-ಜೆಡಿಎಸ್ ಪ್ರತಿಭಟನೆ !

Congress

ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಕಳೆದ ದಿನ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಸಿದ್ದು ಬೆಂಬಲಿಗರು ರೊಚ್ಚಿಗೆದ್ದಿದ್ದಾರೆ. ಇವತ್ತು ಕೂಡಾ ಸಿದ್ದರಾಮಯ್ಯ ತವರು ಮೈಸೂರು ಜಿಲ್ಲೆಯಲ್ಲಿ ದೊಡ್ಡ ಹೋರಾಟ ನಡೆಸಿದ್ದರು. ಇನ್ನು ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್​ ಪ್ರತಿಭಟನೆಗೆ ಮುಂದಾಗಿದೆ. ಹೀಗಾಗಿ ವಾಹನ ಸವಾರರಿಗೆ ಪ್ರತಿಭಟನೆ ಬಿಸಿ ತಟ್ಟಲಿದೆ.


ಇತ್ಸಿತ ಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರು ಪಾದಯಾತ್ರೆ ನಡೆಸಿದ್ದ ಬಿಜೆಪಿ, ಜೆಡಿಎಸ್​​​ ದೋಸ್ತಿಗಳಿಗೆ, ಪ್ರಾಸಿಕ್ಯೂಷನ್ ಬ್ರಹ್ಮಾಸ್ತ್ರವಾಗಿ ಸಿಕ್ಕಿದೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಪಟ್ಟವನ್ನು ಮತ್ತಷ್ಟು ಭದ್ರಗೊಳಿಸಲು ನಿರ್ಧರಿಸಿದ್ದಾರೆ.ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ-ಜೆಡಿಎಸ್ ನಾಯಕರು ಪ್ರತಿಭಟನೆ ಮಾಡಲಿದ್ದಾರೆ. ಇಂದು ರಾಜ್ಯ ರಾಜಕೀಯದ ಅಖಾಡ ರಂಗೇರಲಿದೆ. ಕೋರ್ಟ್ ಒಳಗೆ ಕಾನೂನು ಸಮರ ನಡೆದರೆ ಹೊರಗೆ ಪ್ರತಿಭಟನೆಯ ಕಿಚ್ಚು ಹೊತ್ತಿಕೊಳ್ಳಲಿದೆ. ಇಂದು ಕರ್ನಾಟಕದಾದ್ಯಂತ ಬಿಜೆಪಿ-ಜೆಡಿಎಸ್ ಹಾಗುಕಾಂಗ್ರೆಸ್​ ಪ್ರತಿಭಟನೆ ಹಿನ್ನಲೆ ಬೆಂಗಳೂರಿನಲ್ಲಿ ಕೂಡ ಪ್ರತಿಭಟನಾ ಕಾವು ಹೆಚ್ಚಲಿದೆ. ಹೀಗಾಗಿ ಪ್ರತಿಭಟನೆಯನ್ನ ಹತ್ತಿಕ್ಕಲು ಪೊಲೀಸ್​ ಕೂಡ ಮುಂದಾಗಿದ್ದಾರೆ.


Nk Channel Final 21 09 2023