ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯ ವಿರುದ್ಧ ಕಾಂಗ್ರೆಸ್ ಸಿಟ್ಟು ಭುಗಿಲೆದ್ದಿದ್ದು, ಗವರ್ನರ್ ಕ್ರಮವನ್ನು ಖಂಡಿಸಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೈ ಪಡೆ ಮುಂದಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾ ಪತ್ರ ನೀಡಲು ತೀರ್ಮಾನಿಸಿದೆ. ರಾಷ್ಟ್ರಪತಿಗಳಿಗೆ ಡಿಸಿಗಳ ಮೂಲಕ ಪ್ರತಿಭಟನಾ ಪತ್ರ ನೀಡಲಾಗುತ್ತದೆ. ಈಗಾಗಲೇ ಎಲ್ಲಾ ಶಾಸಕರಿಗೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಕನಿಷ್ಠ ಅರ್ಧ ಕಿಲೋಮೀಟರ್ ನಡೆದು ಹೋಗಿ ಮನವಿ ಸಲ್ಲಿಕೆ ಮಾಡಲಾಗುತ್ತದೆ.