ಸೋಲಿನ ಭಯದಿಂದ ಕಾಂಗ್ರೆಸ್​ ನಾಯಕರು ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ: ಆರ್​. ಅಶೋಕ್

ಬೆಂಗಳೂರು: ಕಾಂಗ್ರೆಸ್​ನ ಎಲ್ಲ ನಾಯಕರಿಗೆ ಕೋರ್ಟ್ ತಪರಾಕಿ ಹಾಕಿದೆ. ರಾಹುಲ್ ಗಾಂಧಿ  ಸೇರಿ ಹಲವರಿಗೆ ಕೋರ್ಟ್​ ಬಿಸಿ ಮುಟ್ಟಿಸಿದೆ. ಶಿವರಾಜ್ ತಂಗಡಗಿ ಕೂಡ ನಾಲಗೆ ಹರಿಬಿಟ್ಟಿದ್ದಾರೆ. ಸೋಲಿನ ಭಯದಿಂದ ಈ ರೀತಿ ಮಾತಾಡುತ್ತಿದ್ದಾರೆ. ಸಂಸ್ಕೃತಿ ಇಲ್ಲದ ಸಚಿವರು ಎಂದು ರಾಜ್ಯ ಕಾಂಗ್ರೆಸ್​  ವಿರುದ್ಧ ವಿಪಕ್ಷ ನಾಯಕ ಆರ್​. ಅಶೋಕ್ ವಾಗ್ದಾಳಿ ಮಾಡಿದರು.

ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್​​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್​ ನಾಯಕರು ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದರು.

ಚಾಯ್ ವಾಲಾ, ಚೌಕಿದಾರ್ ಚೋರ್, ಮೋದಿಗೆ ಪರಿವಾರ ಇಲ್ಲ ಅಂದರು. ನಾವು ಕೂಡ ಅದನ್ನು ಅಸ್ತ್ರ ಮಾಡಿಕೊಂಡಿದ್ದೇವೆ.

ಶಿವರಾಜ್​ ತಂಗಡಗಿ ಈ ಹಿಂದೆ ಬಿಜೆಪಿಯಲ್ಲಿದ್ದಾಗ ಸೋನಿಯಾ ಗಾಂಧಿ ಅವರಿಗೆ ಬೈಯ್ಯುತ್ತಿದ್ದರು. ಈಗ ಮೋದಿ ಅವರಿಗೆ ಅನ್ನುತ್ತಿದ್ದಾರೆ. ಕರ್ನಾಟಕ ಜನತೆಗೆ ಸಂಸ್ಕೃತ ಹೇಳಬೇಕಾದವರೂ, ಈ ರೀತಿ ಮಾತನಾಡುತ್ತಿದ್ದಾರೆ. ಇಡೀ ಸರ್ಕಾರವೇ ಸಂಸ್ಕಾರ ಇಲ್ಲದ, ಹೊಲಸು ಪದ ಉಪಯೋಗ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನೀರಿನ ಕೊರತೆ ಇದ್ದು, ಜನರು ಪರದಾಡುತ್ತಿದ್ದಾರೆ. ಇಷ್ಟು ದಿನ ಕೆರೆಗಳನ್ನ ತುಂಬಿಸಿಲ್ಲ, ಮಣ್ಣು ತಿಂತಿದ್ರಾ? ನೀರು ಕೋಡಲು ಆಗದವರು ನೀರಾವರಿ ಸಚಿವರು. ಬ್ರ್ಯಾಂಡ್ ಬೆಂಗಳೂರು ಬೈಬೈ ಬೆಂಗಳೂರು ಆಗಿದೆ. ಕಲುಷಿತ ನೀರು ಕುಡಿದು ಅನಾರೋಗ್ಯಕ್ಕಿಡಾಗಿದ್ದಾರೆ. ರಾಜ್ಯ ಸರ್ಕಾರ ಏನು ಮಾಡುತ್ತಿದ್ದೆ ಎಂದು ಪ್ರಶ್ನಿಸಿದರು.

ತೇಜಸ್ವಿನಿ ಗೌಡ ನಮ್ಮ ಪಕ್ಷಕ್ಕೆ ಬಂದು ಎಮ್‌ಎಲ್‌ಸಿ ಆಗಿದ್ದರು. ತೇಜಸ್ವಿನಿ ಗೌಡ ಅವರ ಅವಧಿ ಇನ್ನೊಂದು ತಿಂಗಳಲ್ಲಿ ಮುಕ್ತಾಯಗೊಳ್ಳುತ್ತಿತ್ತು. ಎಲ್ಲಾ ಸ್ಥಾನಮಾನ ಕೊಟ್ಟರೆ ಭಾರತೀಯ ಜನತಾ ಪಕ್ಷ ಒಳ್ಳೆಯದು. ಸ್ಥಾನಮಾನ ಕೊಡದಿದ್ದರೆ ಕೆಟ್ಟದ್ದು ಅನ್ನೋ ಮನಸ್ಥಿತಿ ಸರಿಯಲ್ಲ. ಇದಕ್ಕೆಲ್ಲ ಬಿಜೆಪಿ ಸೊಪ್ಪು ಹಾಕುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಅಶೋಕ್ ಹೇಳಿದರು.

ಕಾನೂನು ಬಾಹಿರವಾಗಿ ಅಂಜಲಿ ನಿಂಬಾಳ್ಕರ್ ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದಾರೆ. ಅಂಜಲಿ ನಿಂಬಾಳ್ಕರ್​ ಪತಿ ಹೇಮಂತ್ ನಿಂಬಾಳ್ಕರ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದಾರೆ. ಇದರಿಂದ ಪಾರದರ್ಶಕವಾಗಿ ಚುನಾವಣೆ ನಡೆಸಲು ಆಗಲ್ಲ. ಪತ್ನಿ ಅಭ್ಯರ್ಥಿ, ಪತಿ ಆಯುಕ್ತರು ಆಗಿರುವುದು ಪಕ್ಷಪಾತದ ಧೋರಣೆ ಆಗಲಿದೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ತಿಳಿಸಿದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago