News Karnataka Kannada
Tuesday, April 23 2024
Cricket
ಬೆಂಗಳೂರು

ಪರಿಷತ್​ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ; ಮೊದಲ ಪರೀಕ್ಷೆಯಲ್ಲೇ ಮೈತ್ರಿ ಸೋಲು

ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಪುಟ್ಟಣ್ಣ ಜಯಗಳಿಸಿದ್ದು, ಜೆಡಿಎಸ್​​ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್​ ಸೋಲನ್ನನುಭವಿಸಿದ್ದಾರೆ.
Photo Credit : News Kannada

ಬೆಂಗಳೂರು: ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಪುಟ್ಟಣ್ಣ ಜಯಗಳಿಸಿದ್ದು, ಜೆಡಿಎಸ್​​ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್​ ಸೋಲನ್ನನುಭವಿಸಿದ್ದಾರೆ.

ನೃಪತುಂಗ ರಸ್ತೆಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತಎಣಿಕೆ ನಡೆಯಿತು. ಕಾಂಗ್ರೆಸ್‌ನ ಪುಟ್ಟಣ್ಣ ಒಟ್ಟು 8,260 ಮತಗಳನ್ನು ಗಳಿಸಿದರೆ, ರಂಗನಾಥ್ 6753 ಮತಗಳನ್ನು ಪಡೆದಿದ್ದಾರೆ. ಇದರೊಂದಿಗೆ 1507 ಮತಗಳ ಅಂತರದಿಂದ ಗೆಲುವು ಸಾಧಿಸಿದ ಪುಟ್ಟಣ್ಣ ೨೦೨೬ರ ನ.೧೧ರ ತನಕ ಅಧಿಕಾರದಲ್ಲಿರಲಿದ್ದಾರೆ.

ಬಿಜೆಪಿಯಲ್ಲಿದ್ದ ಪುಟ್ಟಣ್ಣ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದರಿಂದ ಖಾಲಿಯಾಗಿದ್ದ ಬೆಂಗಳೂರು ಶಿಕ್ಷಕ ಕ್ಷೇತ್ರಕ್ಕೆ ಫೆ.೧೬ರಂದು ಉಪಚುನಾವಣೆ ನಡೆದಿತ್ತು. ಇಲ್ಲಿ ಜೆಡಿಎಸ್‌ಗೆ ಕ್ಷೇತ್ರವನ್ನು ಬಿಜೆಪಿ ಬಿಟ್ಟಿಕೊಟ್ಟಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ರಂಗನಾಥ್, ಇದು ಬಿಜೆಪಿ-ಜೆಡಿಎಸ್ ಮೈತ್ರಿಗೆ ಆದ ಸೋಲಲ್ಲ. ಬದಲಿಗಿದು ನನ್ನ ವೈಯಕ್ತಿಕ ಸೋಲು. ಆಡಳಿತದಲ್ಲಿರುವ ಕಾಂಗ್ರೆಸ್‌ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಹಣ ಬಲದಿಂದ ಗೆದ್ದಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು