News Karnataka Kannada
Sunday, April 28 2024
ಬೆಂಗಳೂರು

ವಿಪಕ್ಷ ನಾಯಕರಾಗಿ ಆರ್​.ಅಶೋಕ್​ ಆಯ್ಕೆಗೆ ಕಾಂಗ್ರೆಸ್ ಲೇವಡಿ

Congress mocks R Ashoka's election as Leader of Opposition
Photo Credit : News Kannada

ಬೆಂಗಳೂರು: ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆರ್​.ಅಶೋಕ್ ಆಯ್ಕೆಗೆ ಕಾಂಗ್ರೆಸ್ ಲೇವಡಿ​ ಮಾಡಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್​, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ ಎಂದು ವ್ಯಂಗ್ಯ ಮಾಡಿದೆ.

ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ!

ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಕೂರಿಸಿದೆ ಬಿಜೆಪಿ ಎಂದು ಕಾಂಗ್ರೆಸ್​ ಆಡಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು