Bengaluru 29°C
Ad

ವಿಧಾನ ಪರಿಷತ್ ಚುನಾವಣೆ : 8 ಮಂದಿಯ ಹೆಸರನ್ನು ಫೈನಲ್ ಮಾಡಿದ ಕಾಂಗ್ರೆಸ್

ವಿಧಾನ ಪರಿಷತ್ ಚುನಾವಣೆಗೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಯ ಹೆಸರನ್ನು ಕಾಂಗ್ರೆಸ್ ಫೈನಲ್ ಮಾಡಿದೆ. ಈ ಮೂಲಕ ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಮೊದಲು ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದಂತಾಗಿದೆ.

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಯ ಹೆಸರನ್ನು ಕಾಂಗ್ರೆಸ್ ಫೈನಲ್ ಮಾಡಿದೆ. ಈ ಮೂಲಕ ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಮೊದಲು ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದಂತಾಗಿದೆ.

ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು, ಸಚಿವ ಎನ್.ಎಸ್. ಬೋಸರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನುಗೆ ಟಿಕೆಟ್ ಘೋಷಿಸಲಾಗಿದೆ. ಅಲ್ಲದೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ.

 

Ad
Ad
Nk Channel Final 21 09 2023
Ad