ಕೇಳಿದಷ್ಟು ಬರ ಪರಿಹಾರ ನೀಡಿಲ್ಲ ಎಂದು ನಾಳೆ ವಿಧಾನಸೌಧದಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ನೀಡಿದೆ. ಕೇಳಿದಷ್ಟು ಬರ ಪರಿಹಾರ ನೀಡಿಲ್ಲ ಎಂದು ನಾಳೆ ಬೆಳಗ್ಗೆ 9.30ಕ್ಕೆ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಲೋಕಸಭೆ ಚುನಾವಣೆ, ಭಾನುವಾರ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಕೈಗೊಳ್ಳುತ್ತಿದ್ದು, ಇದರ ಮಧ್ಯೆಯೇ ಪ್ರತಿಭಟನೆ ನಡೆಸುವ ಮೂಲಕ ತಂತ್ರ ಹೆಣೆಯಲು ಕಾಂಗ್ರೆಸ್‌ ಸಂಚು ಹೂಡುತ್ತಿದೆ.

“ರಾಜ್ಯ ಸರ್ಕಾರವು 18,172 ಕೋಟಿ ರೂ. ಬರ ಪರಿಹಾರ ನೀಡಬೇಕು ಎಂದು ಮನವಿ ಮಾಡಿದೆ. ಇಷ್ಟೂ ಹಣ ಬಿಡುಗಡೆ ಮಾಡಬೇಕು ಎಂಬುದಾಗಿ ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ” ಎಂದು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಮಾಹಿತಿ ನೀಡಿದರು.

ಕೇಂದ್ರ ಸರ್ಕಾರ ಕೇಳಿದಷ್ಟು ಬರ ಪರಿಹಾರ ನೀಡಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಾಗಾಗಿ, ಪೂರ್ಣ ಪ್ರಮಾಣದ ಪರಿಹಾರದ ಮೊತ್ತ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲು ಕಾಂಗ್ರೆಸ್‌ ತೀರ್ಮಾನ ಮಾಡಿದೆ.

 

Chaitra Kulal

Recent Posts

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

13 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

16 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

30 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

32 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

54 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

1 hour ago