Bengaluru 16°C

ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್​ ಕಾರ್ಯಕರ್ತನಿಗೆ ಹೃದಯಾಘಾತ

 ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ಕಾಂಗ್ರೆಸ್​​ ಕಾರ್ಯಕರ್ತ ಸಾವನ್ನಪ್ಪಿರುವಂತಹ ಘಟನೆ ನಗರದ ಪ್ರೆಸ್ ಕ್ಲಬ್​​ನಲ್ಲಿ ನಡೆದಿದೆ. ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ. 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ಕಾಂಗ್ರೆಸ್​​ ಕಾರ್ಯಕರ್ತ ಸಾವನ್ನಪ್ಪಿರುವಂತಹ ಘಟನೆ ನಗರದ ಪ್ರೆಸ್ ಕ್ಲಬ್​​ನಲ್ಲಿ ನಡೆದಿದೆ. ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ.


ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಸಂಘದಿಂದ ಸುದ್ದಿಗೋಷ್ಠಿ ನಡೆಯುತ್ತಿರುವಾಗ ಘಟನೆ ನಡೆದಿದೆ.


ಹೃದಯಾಘಾತವಾದ ಬಳಿಕ ಕೂಡಲೇ ಹತ್ತಿರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.


 

Nk Channel Final 21 09 2023