Ad

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ: ಬಿಜೆಪಿಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಸೇಡು ಎಂದ ಅಶೋಕ್

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಇಂದು (ಶನಿವಾರ) ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಇಂದು (ಶನಿವಾರ) ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

Ad
300x250 2

‘ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ’ ಎಂದು ಆರೋಪಿಸಿದ್ದಾರೆ.

Ad
Ad
Nk Channel Final 21 09 2023
Ad