ಬೆಂಗಳೂರು

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್ : ಈಶ್ವರಪ್ಪಗೆ ರಿಲೀಫ್

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ  ರಿಲೀಫ್ ಸಿಕ್ಕಿದೆ. ಉಡುಪಿ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ.

2022ರ ಎ. 11ರಂದು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಸಚಿವ ಕೆ.ಎಸ್‌.ಈಶ್ವರಪ್ಪ ಕಿರುಕುಳವೇ ಕಾರಣ ಎಂದು ಡೆತ್‌ನೋಟ್‌ ಬರೆದಿಟ್ಟಿದ್ದರು.ಈ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರಾಗಿದ್ದ ಈಶ್ವರಪ್ಪ ರಾಜೀನಾಮೆ ನೀಡಿದ್ದರು.

ಪೊಲೀಸರು ಈಶ್ವರಪ್ಪ ಹಾಗೂ ಸಂತೋಷ್‌ ಪಾಟೀಲ್‌ ಮನೆಯವರ ಹೇಳಿಕೆಗಳನ್ನೂ ದಾಖಲಿಸಿಕೊಂಡಿದ್ದರು. ಆದರೆ ಆತ್ಮಹತ್ಯೆ ಪ್ರಚೋದನೆಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಕೋರ್ಟ್‌ಗೆ ಬಿ-ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ಪ್ರಶ್ನಿಸಿದ ಸಂತೋಷ್‌ ಕುಟುಂಬದವರು, ರಾಜಕೀಯ ಪ್ರಭಾವಕ್ಕೆ ಒಳಗಾಗಿ ಪೊಲೀಸರು ಬಿ-ರಿಪೋರ್ಟ್‌ ಸಲ್ಲಿಸಿದ್ದಾರೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದುವರೆಗಿನ ವಾದ-ಪ್ರತಿವಾದ ಆಲಿಸಿದ ಕೋರ್ಟ್‌, ತನಿಖಾಧಿಕಾರಿಗಳು ಸಲ್ಲಿಸಿದ್ದ ಬಿ-ರಿಪೋರ್ಟ್‌ ಅಂಗೀರಿಸುವ ಮೂಲಕ ಈಶ್ವರಪ್ಪಗೆ ಬಿಗ್‌ ರಿಲೀಫ್ ನೀಡಿದೆ.

Ashitha S

Recent Posts

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

36 seconds ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

5 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

20 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

42 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

44 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

1 hour ago