Bengaluru 28°C
Ad

ಬಿಜೆಪಿ ವಿರುದ್ದ ಅಪಪ್ರಚಾರ: ರಾಹುಲ್‌ಗಾಂಧಿಗೆ ಜಾಮೀನು ಮಂಜೂರು

Raga (1)

ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿಗೆ ಜಾಮೀನು ಮಂಜೂರಾಗಿದೆ.

ಮಾಜಿ ಸಂಸದ ಡಿಕೆ ಸುರೇಶ್ ಅವರು ಶ್ಯೂರಿಟಿ ಸಲ್ಲಿಸಿದ್ದಾರೆ. ವಿಚಾರಣೆ ಜೂನ್ 30ಕ್ಕೆ ಮುಂದೂಡಲಾಗಿದೆ. 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು.

ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

Ad
Ad
Nk Channel Final 21 09 2023
Ad