Bengaluru 22°C
Ad

ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ !

Bsy

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸಲ್ಲಿ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಬೆನ್ನಲ್ಲೇ ಕೋರ್ಟ್ ನಿಂದ ಬಿಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿರೋದಾಗಿ ತಿಳಿದು ಬಂದಿದೆ.

ಪೋಕ್ಸ್ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಇಂದು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ. ಮತ್ತೊಂದೆಡೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಐಡಿ ಪೊಲೀಸರು ಪೋಕ್ಸೋ ಕೇಸ್ ನಲ್ಲಿ ಅಗತ್ಯ ಬಿದ್ದರೇ ಯಾವುದೇ ಸಂದರ್ಭದಲ್ಲಿ ಬಂಧಿಸಬಹುದು ಅಂತ ತಿಳಿಸಿದ್ದರು.

Ad
Ad
Nk Channel Final 21 09 2023
Ad