ಬೆಂಗಳೂರು: ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ನಡೆಯಿತು.
ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಮತ್ತು ಎಸ್ಐಟಿ ಲಾಯರ್ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಇದೀಗ ರೇವಣ್ಣ ಅರ್ಜಿ ವಿಚಾರಣೆಯನ್ನು ಸೋಮವಾರ ಬೆಳಗ್ಗೆ 11:30ಕ್ಕೆ ಮುಂದೂಡಿದೆ.
ಮೈಸೂರು ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಹೆಚ್.ಡಿ ರೇವಣ್ಣ ಅವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ ಆಗಿರುವುದರಿಂದ ಸೋಮವಾರದ ತನಕ ಜೈಲುವಾಸ ಅನುಭವಿಸಬೇಕಿದೆ.