Bengaluru 22°C
Ad

ದರ್ಶನ್ ಪ್ರಕರಣಕ್ಕೆ ಅಲ್ಪ ವಿರಾಮ: ಆರೋಪ ಪಟ್ಟಿ ಮಾಹಿತಿ ಪ್ರಕಟಿಸದಂತೆ ಹೈಕೋರ್ಟ್ ಸೂಚನೆ

Darshan (3)

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿದ ಪೊಲೀಸರು ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ವಿರುದ್ಧ 3991 ಪುಟಗಳ ವಿವರವಾದ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.

ಆರೋಪ ಪಟ್ಟಿಯಲ್ಲಿ ಕೊಲೆಯ ವಿವರ, ಸ್ಥಳ ಮಹಜರು, ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಸಾಕ್ಷಿಗಳ ಹೇಳಿಕೆ, ಸಾಕ್ಷ್ಯಗಳ ಮಾಹಿತಿ ಇನ್ನೂ ಹಲವು ಅಂಶಗಳನ್ನು ಸೇರಿಸಲಾಗಿದೆ. ಆರೋಪ ಪಟ್ಟಿ ದಾಖಲು ಮಾಡಿದಾಗಿನಿಂದಲೂ ಆರೋಪ ಪಟ್ಟಿಯಲ್ಲಿರುವ ಅಂಶಗಳು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವರದಿ ಆಗುತ್ತಲೇ ಇವೆ. ದರ್ಶನ್, ಪವಿತ್ರಾ ಹಾಗೂ ರೇಣುಕಾ ಸ್ವಾಮಿಯ ಕೆಲವು ಫೋಟೊಗಳು ಸಹ ಹರಿದಾಡುತ್ತಿವೆ. ಆದರೆ ಇದೀಗ ಹೈಕೋರ್ಟ್ ಸೂಚನೆಯೊಂದನ್ನು ನೀಡಿದ್ದು, ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ.

ಆರೋಪ ಪಟ್ಟಿಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಅಥವಾ ಪ್ರಿಂಟ್ ಮಾಡದಂತೆ ಹೈಕೋರ್ಟ್ ಮಾಧ್ಯಮ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಅಸಲಿಗೆ ಆಗಸ್ಟ್ 27 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರಿಗೆ ಸಂಬಂಧಿಸಿದ ಖಾಸಗಿ ಚಿತ್ರಗಳನ್ನು ಮಾಧ್ಯಮಗಳಲ್ಲಿ ಪ್ರದರ್ಶಿಸದಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿ ಪ್ರತಿಬಂಧಕಾಜ್ಞೆ ತಂದಿದ್ದರು. ಈಗ ಅದೇ ಅರ್ಜಿಯನ್ನು ಉಲ್ಲೇಖಿಸಿ, ಆರೋಪ ಪಟ್ಟಿಯಲ್ಲಿರುವ ಮಾಹಿತಿ ಹಾಗೂ ಹರಿದಾಡುತ್ತಿರುವ ಕೆಲವು ಚಿತ್ರಗಳನ್ನು ಪ್ರದರ್ಶಿಸದಂತೆ ಸೂಚನೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಹೈಕೋರ್ಟ್ ಏಕಸದಸ್ಯ ಪೀಠವು ಮುಂದಿನ ವಿಚಾರಣೆ ವರೆಗೂ ಆರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಪ್ರಸಾರ ಮಾಡದಂತೆ ಸೂಚನೆ ನೀಡಿದೆ.

Ad
Ad
Nk Channel Final 21 09 2023