ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ತಳಿ ಜೆಎನ್. 1 (JN 1) ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶೇ 50% ಕ್ಕೂ ಹೆಚ್ಚು ಒಮಿಕ್ರಾನ್ ರೂಪಾಂತರಿ JN.1 ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಜನವರಿ 2ರಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಶುರು ಮಾಡಲು ಸರ್ಕಾರ ಮುಂದಾಗಿದೆ.
ರಾಜ್ಯಾದ್ಯಂತ ಉಚಿತ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ದೇಶದಲ್ಲಿ ಕೊರೊನಾ JN.1 ರೂಪಾಂತರಿ ಹಾವಳಿ ಹಿನ್ನಲೆ ಆರೋಗ್ಯ ಇಲಾಖೆ ವ್ಯಾಕ್ಸಿನ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮತ್ತೆ ವ್ಯಾಕ್ಸಿನ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.