ಐಎಲ್ ಐ, ಸಾರಿ ಇರೋರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗೂಂಡೂರಾವ್

ಬೆಂಗಳೂರು:   ಎಲ್ಲ ಐಎಲ್ ಐ ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಕೋವಿಡ್ ಕುರಿತಂತೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದರು.

ಪ್ರತಿನಿತ್ಯ 7 ಸಾವಿರಕ್ಕೂ ಹೆಚ್ಚು ಟೆಸ್ಟ್ ಗಳನ್ನ ಮಾಡಲಾಗುತ್ತಿದೆ. ಕೋವಿಡ್ ಪಾಸಿಟಿವಿಟಿ ದರ ಶೇ 3.82 ರಷ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಇನ್ನೂ ಇಳಿಮುಖಗೊಂಡಿಲ್ಲ. ಕೇರಳ ರಾಜ್ಯದಲ್ಲಿ ಈಗಾಗಲೇ ಕೋವಿಡ್ ನಲ್ಲಿ ಇಳಿಕೆಯ ಟ್ರೆಂಡ್ ಆರಂಭವಾಗಿದೆ. ಹೀಗಾಗಿ ಕೋವಿಡ್ ಪಾಸಿಟಿವ್ ಹೊಂದಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ ಎಂದರು. ವಿಶೇಷವಾಗಿ ವಯಸ್ಕರಲ್ಲಿ ಐಎಲ್ಐ ಸಾರಿ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಲು ಸೂಚಿಸಲಾಗಿದೆ. ಈ ಮೊದಲು ಈ ಪ್ರಕರಣಗಳಲ್ಲಿ 20 ರಲ್ಲಿ ಒಂದು ಮಾತ್ರ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿತ್ತು. ಇನ್ಮುಂದೆ ಎಲ್ಲ ಐ.ಎಲ್.ಐ ಇರೋರಿಗೆ ಕೋವಿಡ್ ಟೆಸ್ಟ್ ನಡೆಸುವಂತೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದರು.

ರೋಗ ಲಕ್ಷಣಗಳು ಇರುವವರ ಮೇಲೆ ನಿಗಾ ವಹಿಸಿ ಟೆಸ್ಟಿಂಗ್ ಮಾಡಲಾಗುತ್ತಿದೆ. ಮನೆಯಲ್ಲಿ ಐಸೊಲೇಷನ್ ಆಗಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಹೇಳಲಾಗಿದೆ. ಕರ್ನಾಟಕದಲ್ಲಿ ಮುಂದಿನ ವಾರದಲ್ಲಿ ಕೋವಿಡ್ ಇಳಿಕೆಯ ಟ್ರೆಂಡ್ ಶುರುವಾಗಬಹುದು ಎಂದು ನೀರಿಕ್ಷಿಸಲಾಗಿದೆ. ನಿನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅವುಗಳನ್ನ ಅಳವಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ನಾಳೆ ಕೊರೋನಾ ಹೆಲ್ಪ್ ಲೈನ್ ಲೋಕಾರ್ಪಣೆ ಮಾಡಲಾಗುವುದು. ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು

Ramya Bolantoor

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

2 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

2 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

4 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago