ಬೆಂಗಳೂರು: ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಶಾಸಕ, ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಮಾಲೀಕನಿಗೆ ಮೂರು ಹಸುಗಳನ್ನು ನೀಡಿದ್ದಾರೆ. ಮೂರು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದ ಮೂರು ಹಸುಗಳನ್ನು ಜಮೀರ್ ಅವರು ಕೊಟ್ಟ ಮಾತಿನಂತೆ ಇಂದು ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಹಸ್ತಾಂತರಿಸಿದರು. ‌

ಈ ವೇಳೆ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆಯ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜೊತೆ ಇದ್ದೇವೆ ಎಂದು ಹೇಳಿದರು. ಈ ವೇಳೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.