ಬೆಂಗಳೂರು : ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುವವರ ವಿರುದ್ಧ ಅಪರಾಧ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಅರಣ್ಯ ಸಚಿವ ಬಿ.ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಮಾತನಾಡಿದ ಸಚಿವರು, ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಅಪರಾಧ ಪ್ರಕರಣಗಳನ್ನು ದಾಖಲಿಸಿ, ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಇಲ್ಲದೇ ಇದ್ದಲ್ಲಿ ಸಂಬಂಧಿತ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.