ಬೆಂಗಳೂರು : ಮೊoಥಾ ಸೈಕ್ಲೋನ್ ಎಫೆಕ್ಟ್ ಗೆ ದಕ್ಷಿಣ ಭಾರತ ತತ್ತರಿಸಿದೆ. ವಿಪರೀತ ಮಳೆಗೆ ಬೆಳೆ ಹಾನಿ ಸಂಭವಿಸಿದ್ದು, ರೈತರು ಇಳುವರಿ ಕಡಿಮೆಯಾಗಿ ಕಂಗಾಲಾಗಿದ್ದಾರೆ. ಈ ನಡುವೆ ಮಾರುಕಟ್ಟೆಗೆ ತರಕಾರಿ ಸರಬರಾಜು ಪ್ರಕ್ರಿಯೆಯಲ್ಲಿ ವ್ಯತ್ಯಯ ಉಂಟಾಗಿದೆ. ಪರಿಣಾಮವಾಗಿ ಎಲ್ಲಾ ಬೆಲೆಗಳು ಗಗನಕ್ಕೇರಿದೆ.
ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಕರ್ನಾಟಕದ ಕೆಲ ಭಾಗದಲ್ಲೂ ಭಾರೀ ಮಳೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಅಕಾಲಿಕ ಮಳೆಯಾಗಿತ್ತು. ಇದರಿಂದ ತರಕಾರಿ ಬೆಳೆ ಹಾಳಾಗಿದ್ದು, ಸರಿಯಾಗಿ ಬೆಳೆ ಬಂದಿಲ್ಲ. ಬೆಳೆದ ಬೆಳೆ ಕೈಗೆ ಬರದ ಕಾರಣ ತರಕಾರಿಗಳ ಬೆಲೆ ಗಗನಕ್ಕೇರಿದೆ.

