ಬೆಂಗಳೂರು: ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿ ವಂಚನೆ ಮಾಡಿದ್ದ ಆರೋಪಿಯನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಶುಭಾಂಗ್ ಜೈನ್(26) ಬಂಧಿತ ಆರೋಪಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಶುಭಾಂಗ್ ಜೈನ್, ಕಂಪನಿಯ ಕ್ರಿಪ್ಟೋ ಕರೆನ್ಸಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದನು. ಪಾಸ್‌ವರ್ಡ್ ಬದಲಿಸಿ ರೂಪಾಯಿಗೆ ಕನ್ವರ್ಟ್ ಮಾಡಿ ಬಳಿಕ ಸ್ನೇಹಿತರ ಖಾತೆಗಳಿಗೆ ವರ್ಗಾವಣೆ ಮಾಡಿ ವಂಚಿಸಿದ್ದನು.
ಈ ಕುರಿತು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನಂತರ ವಂಚನೆ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಬಳಿಕ ನಿರಂತರ ತನಿಖೆ ನಡೆಸಿದ ಅಧಿಕಾರಿಗಳು, ಇದೀಗ ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇನ್ನು ಬಂಧಿತನಿಂದ 2 ಮೊಬೈಲ್, ಎರಡು ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
Ad