ಬೆಂಗಳೂರು: ವಿದ್ಯುತ್ ವ್ಯತ್ಯಯದ ಕಾರಣ ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.‌

ಈ ನಿಲ್ದಾಣದಲ್ಲಿ ರೈಲುಗಳು ನಿಲ್ಲುವುದಿಲ್ಲ. ವಿದ್ಯುತ್ ಪೂರೈಕೆ ಪುನಃಸ್ಥಾಪನೆಯಾದ ನಂತರ ಸಾಮಾನ್ಯ ನಿಲುಗಡೆ ಮತ್ತೆ ಆರಂಭವಾಗಲಿದೆ. ಪ್ರಯಾಣಿಕರು ಸಹಕರಿಸಬೇಕು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರು ತಮ್ಮ ಪ್ರಯಾಣವನ್ನು ತಕ್ಕಂತೆ ಯೋಜಿಸಿಕೊಳ್ಳುವಂತೆ ವಿನಂತಿಸಲಾಗಿದೆ. ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ತಿಳಿಸಿದೆ. ಇಂದು ಬೆಳಿಗ್ಗೆ ದಿಢೀರ್‌ನೆ ಈ ಸಮಸ್ಯೆ ಉಂಟಾಗಿದ್ದರಿಂದ ಕಬ್ಬನ್ ಪಾರ್ಕ್‌ಗೆ ಇಳಿಯಬೇಕಿದ್ದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.