Bengaluru 28°C

ಫೆಂಗಲ್ ಚಂಡಮಾರುತ ಪರಿಣಾಮ: ಗಗನಕ್ಕೇರಿದ ತರಕಾರಿ ಬೆಲೆ

ಫೆಂಗಲ್ ಚಂಡಮಾರುತದಿಂದಾಗಿ ವಿಪರೀತ ಮಳೆಯಾದ ಪರಿಣಾಮ ತರಕಾರಿಗಳ ಬೆಲೆ ಗಗನಕ್ಕೇರಿದೆ. ಕರ್ನಾಟಕ ಸೇರಿದಂತೆ ತಮಿಳುನಾಡು, ಚೆನ್ನೈನಲ್ಲಿ ಭಾರೀ ಮಳೆಯಾದ ಹಿನ್ನೆಲೆ ಬೆಳೆ ಹಾನಿಯಾಗುವುದರ ಜೊತೆಗೆ ಇಳುವರಿ ಕಡಿಮೆಯಾಗಿದೆ.

ಬೆಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ವಿಪರೀತ ಮಳೆಯಾದ ಪರಿಣಾಮ ತರಕಾರಿಗಳ ಬೆಲೆ ಗಗನಕ್ಕೇರಿದೆ. ಕರ್ನಾಟಕ ಸೇರಿದಂತೆ ತಮಿಳುನಾಡು, ಚೆನ್ನೈನಲ್ಲಿ ಭಾರೀ ಮಳೆಯಾದ ಹಿನ್ನೆಲೆ ಬೆಳೆ ಹಾನಿಯಾಗುವುದರ ಜೊತೆಗೆ ಇಳುವರಿ ಕಡಿಮೆಯಾಗಿದೆ. ಇದರ ಪರಿಣಾಮ ತರಕಾರಿ ಬೆಲೆ ಹೆಚ್ಚಾಗಿದೆ.


ಬೆಳ್ಳುಳ್ಳಿ ಕೆ.ಜಿಗೆ 600 ರೂ. ಗಡಿ ದಾಟಿದ್ದು, ನುಗ್ಗೆಕಾಯಿ ಕೆ.ಜಿಗೆ 500ರೂ. ತಲುಪಿದೆ. ಒಂದು ಪೀಸ್ ನುಗ್ಗೆಕಾಯಿ 60ರೂ. ಆಗಿದೆ. ಈರುಳ್ಳಿ ಸೆಂಚುರಿಯಾದರೆ, ಟೊಮೆಟೋ ಅರ್ಧ ಸೆಂಚುರಿ ಬಾರಿಸಿದೆ. ಒಟ್ಟಾರೆ ತರಕಾರಿ ದರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ.


ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರಗಳಲ್ಲಿ ಮಳೆಯಿಂದಾಗಿ ಇಳುವರಿ ಕಡಿಮೆಯಾಗಿದ್ದು, ಅಗತ್ಯಕ್ಕೆ ತಕ್ಕಷ್ಟು ಪೂರೈಕೆಯಾಗದ ಕಾರಣ ತರಕಾರಿಗಳ ಬೆಲೆಯಲ್ಲಿ ಏರಿಕೆಯಾಗಿದೆ.


 

Nk Channel Final 21 09 2023