Bengaluru 24°C
Ad

ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಮಕ್ಕಳು ಸೇರಿ ಕುಟುಂಬದ ಐವರು ಗಂಭೀರ

ಮನೆಯೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡಿದ್ದಾರೆ. ಈನ ಘಟನೆ ಸಂಪಿಗೇಹಳ್ಳಿ ಸಮೀಪದ ಎಂಎಸ್ ನಗರದಲ್ಲಿ ನಡೆದಿದೆ. ಬೆಂಕಿಯಲ್ಲಿ ಸಿಲಿಕಿದ ಕುಟುಂಬ ಶೇಕಡ 90ರಷ್ಟು ಸುಟ್ಟು ಗಾಯಗಳಾಗಿವೆ.

ಬೆಂಗಳೂರು: ಮನೆಯೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡಿದ್ದಾರೆ. ಈನ ಘಟನೆ ಸಂಪಿಗೇಹಳ್ಳಿ ಸಮೀಪದ ಎಂಎಸ್ ನಗರದಲ್ಲಿ ನಡೆದಿದೆ. ಬೆಂಕಿಯಲ್ಲಿ ಸಿಲಿಕಿದ ಕುಟುಂಬ ಶೇಕಡ 90ರಷ್ಟು ಸುಟ್ಟು ಗಾಯಗಳಾಗಿವೆ.

ದಂಪತಿ ಮದನ್ ಚೌಹಾರ (32), ಪ್ರೇಮ್ ಜಾಲ(28) ಹಾಗೂ ಮಕ್ಕಳಾದ ಹಿರದ್ (12), ಪ್ರಶಾಂತ್ (06), ಅನಿತಾ (8) ಈ ಐವರು ಗಂಭೀರ ಗಾಯಗೊಂಡಿದ್ದಾರೆ. ತಡರಾತ್ರಿ ಗ್ಯಾಸ್‌ ಲಿಂಕ್‌ ಆಗಿದ್ದು, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಸಿಲಿಂಡರ್‌ ಸ್ಫೋಟಗೊಂಡಿದೆ ಎನ್ನಲಾಗಿದೆ. ನಿದ್ದೆ ಮಂಪರಿನಲ್ಲಿದ್ದವರಿಗೆ ಗಂಭೀರವಾದ ಸುಟ್ಟು ಗಾಯವಾಗಿವೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ನೇಪಾಳ ಮೂಲದ ಕುಟುಂಬವು ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸಂಪಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad
Ad
Nk Channel Final 21 09 2023
Ad