ಬೆಂಗಳೂರು: ಬೆಂಗಳೂರಿನ ಜನನಿಬಿಡ ನಂದಿನಿ ಲೇಔಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಭೀಕರವಾಗಿ ಅಪಘಾತಕ್ಕೀಡಾಗಿದೆ. ಲಾರಿ ವೇಗವಾಗಿ ಬಂದು ರಸ್ತೆ ಬದಿಗೆ ಅಪ್ಪಳಿಸುವಾಗ ಅದರ ಪಕ್ಕದಲ್ಲೇ ಇದ್ದ ಇಬ್ಬರು ಬೈಕ್ ಸವಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಾರಿಯಲ್ಲಿದ್ದ ಎಲ್‌ಪಿಜಿ ಸಿಲಿಂಡರ್‌ಗಳಿಂದಾಗಿ ಸುತ್ತಮುತ್ತಲಿನ ನಿವಾಸಿಗಳಲ್ಲಿ ಭಾರಿ ಆತಂಕ ಮೂಡಿತ್ತು. ಈ ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಜನವಸತಿ ಪ್ರದೇಶಗಳಲ್ಲಿ ಇಂತಹ ಭಾರಿ ವಾಹನಗಳ ಸಂಚಾರದ ಬಗ್ಗೆ ಸಾರ್ವಜನಿಕರು ಈಗ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

