Bengaluru 25°C
Ad

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಹೃದಯಾಘಾತದಿಂದ ನಿಧನ

 ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ, ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾದರು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು.

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ, ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾದರು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸಾಗಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಕೆಂಪಣ್ಣ ಆಪ್ತರು, ಕುಟುಂಬದ ಮೂಲಗಳು ತಿಳಿಸಿವೆ.

Ad
Ad
Nk Channel Final 21 09 2023