ಬೆಂಗಳೂರು : ಕಿರಾತಕ ಚಿತ್ರದ ಮೂಲಕ ಗಮನ ಸೆಳೆದಿದ್ದ ಖ್ಯಾತಿ ಖಳನಟ ಡ್ಯಾನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಡ್ಯಾನಿಯಲ್ ಅವರು ಎದೆನೋವಿನಿಂದ ಇತ್ತೀಚೆಗೆ ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಡ್ಯಾನಿಯಲ್ ಬಾಲಾಜಿಗೆ 48 ವರ್ಷ. ಕನ್ನಡ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಕುಟುಂಬ ಸದಸ್ಯರು ಹೌದು. ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿದ್ದಾರೆ. ಕಿರಾತಕ, ಶಿವಾಜಿನಗರ, ಬೆಂಗಳೂರು ಅಂಡರ್ವರ್ಲ್ಡ್, ಡವ್ ಸಿನಿಮಾಗಳಲ್ಲಿ ನಟಿಸಿದ್ದು, ಒಳ್ಳೆ ಹೆಸರು ಮಾಡಿದ್ದರು. ಇಷ್ಟು ಚಿಕ್ಕ ವಯಸ್ಸಿನಲ್ಲೇ ಅಗಲಿರುವುದು ಅನೇಕರಿಗೆ ಬೇಸರ ತಂದಿದೆ.