ಬೆಂಗಳೂರು: ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, ಸೆ.17 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ಎಲ್ಲಾ 17 ಆರೋಪಿಗಳನ್ನು ಅವರು ಇರುವ ಜೈಲುಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ & ಗ್ಯಾಂಗ್ ನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಪೊಲೀಸರು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ನಟ ದರ್ಶನ್ ರನ್ನು ಬಳ್ಳಾರಿ ಜೈಲಿನಿಂದ ವಿಚಾರಣೆಗೆ ಹಾಜರುಪಡಿಸಲಾಗಿತ್ತು.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡವಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸಲ್ಲಿಕೆಯಾಗಿದೆ. ಒಟ್ಟಿನಲ್ಲಿ ಇಂದು ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ.
Ad