ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.ದರ್ಶನ್ ಅವರ ಪರ ವಕೀಲರು, ಶನಿವಾರ ಜಾಮೀನು ಕೋರಿ ನಗರದ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರು ಸೆ.23ಕ್ಕೆ ವಿಚಾರಣೆ ಮುಂದೂಡಿದ್ದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಹಾಗೂ ಇತರ ರೌಡಿಶೀಟರ್‌ಗಳಿಗೆ ವಿಶೇಷ ಆತಿಥ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್‌ಗಾರ್ಡನ್ ನಾಗ ಸೇರಿ 20 ಮಂದಿ ಕೈದಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ರವಿವಾರ ಸ್ಥಳಾಂತರಿಸಲಾಗಿದೆ.
Ad