ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ 3,991 ಚಾರ್ಜಶೀಟ್ ಸಲ್ಲಿಕೆ ಆಗಿದೆ. ಇದರಲ್ಲಿ ರೇಣುಕಾ ಸ್ವಾಮಿ ಕೊಲೆಯ ಇಂಚಿಂಚೂ ಮಾಹಿತಿ ಇದೆ. ದರ್ಶನ್ ಎ2 ಆರೋಪಿ ಆಗಿ ಮುಂದುವರಿದಿದ್ದಾರೆ. ಅವರ ವಿರುದ್ಧ ಗಂಭೀರ ಆರೋಪಗಳು ಚಾರ್ಜ್​ಶೀಟ್​ನಲ್ಲಿ ಇವೆ. ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಡೆದ ಬಳಿಕ ಅದನ್ನು ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ದರ್ಶನ್ ಕೊಲೆ ನಡೆದ ಸ್ಥಳದಲ್ಲಿ ಇರುವುದು ಹಾಗೂ ಕೊಲೆ ಬಳಿಕ ಸ್ಥಳದಿಂದ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾ ಸ್ವಾಮಿ ರಕ್ತ ಇರುವುದು ಪತ್ತೆ ಆಗಿದೆ. ಇದಕ್ಕೆ ಸಾಕ್ಷ್ಯಗಳು ಕೂಡ ಸಿಕ್ಕಿವೆ. ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ್ದು ಚಾರ್ಜ್​ಶೀಟ್​ನಲ್ಲಿ ದೃಢಪಟ್ಟಿದೆ.

ಪವಿತ್ರಾ ಗೌಡ ಅವರು ಕೊಲೆ ಮಾಡಲು ಮೂಲ ಕಾರಣ ಅನ್ನೋದು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ ಆಗಿದೆ. ಹಲ್ಲೆ ನಡೆಸುವ ಸ್ಥಳದಲ್ಲಿ ಹಾಜರಿದ್ದರು ಮತ್ತು ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿರೋದು ಅಧಿಕೃತ ಆಗಿದೆ.

ಇನ್ನು ದರ್ಶನ್ ಮತ್ತು ಗ್ಯಾಂಗ್​​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ. ಸ್ಪೆಷಲ್ ಕೋರ್ಟ್ ಅಥವಾ ತ್ವರಿತ ಕೋರ್ಟ್​ಗೆ ನೀಡಲು ಸರ್ಕಾರಕ್ಕೆ ಮನವಿ ಮಾಡಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಒಂದೊಮ್ಮೆ ಸರ್ಕಾರ ಇದಕ್ಕೆ ಒಪ್ಪಿಗೆ ಕೊಟ್ಟರೆ ಆದಷ್ಟು ಬೇಗ ಪ್ರಕರಣ ಇತ್ಯರ್ಥ ಆಗಲಿದೆ.