ಬೆಂಗಳೂರು: ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಇಂದು (ಆಗಸ್ಟ್ 1) ಈ ಕೇಸ್ನ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಪರಪ್ಪನ ಆಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ ನಾಲ್ವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರೋಪಿಗಳ ಹೆಸರು ಹೇಳಿ ಹಾಜರಾತಿ ಪಡೆದ ನ್ಯಾಯಾಧೀಶರು ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದ್ದಾರೆ.

