Ad

ನಟ ದರ್ಶನ್‌ಗೆ ಮತ್ತೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ

Dboss

ಬೆಂಗಳೂರು:  ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಕೋರ್ಟ್​, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ. ಜುಲೈ 18ರವರೆಗೆ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.

Ad
300x250 2

ರೇಣುಕಾಸ್ವಾಮಿ ಕೊಲೆ ಕೇಸ್​ನ ಪ್ರಕರಣದ ಎ2 ಆರೋಪಿ ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್​ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು.

ಮಹಿಳಾ ಎ1 ಆರೋಪಿ ಪವಿತ್ರಾ ಗೌಡ ಪ್ರತ್ಯೇಕವಾಗಿ ಕೋರ್ಟ್​​ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್​ ಜುಲೈ 18ರವರೆಗೆ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Ad
Ad
Nk Channel Final 21 09 2023
Ad