ಬೆಂಗಳೂರು: ನಟ ದರ್ಶನ್ ಅವರನ್ನು ಅಪಾರವಾಗಿ ಪ್ರೀತಿಸುವ ಅಭಿಮಾನಿಗಳು ಇದ್ದಾರೆ. ಇತ್ತೀಚೆಗೆ ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದರೂ ಕೂಡ ಅವರ ಪರವಾಗಿಯೇ ಕೆಲವು ಫ್ಯಾನ್ಸ್ ಜೈಕಾರ ಕೂಗುತ್ತಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅಭಿಮಾನಿಗಳು ಇನ್ನಷ್ಟು ಆ್ಯಕ್ಟೀವ್ ಆಗಿದ್ದಾರೆ. ಅಚ್ಚರಿ ಏನೆಂದರೆ, ದರ್ಶನ್ಗೆ ಜೈಲಿನಲ್ಲಿ ನೀಡಿದ ಖೈದಿ ನಂಬರ್ ಕೂಡ ಈಗ ಅಭಿಮಾನಿಗಳ ಪಾಲಿನ ಲಕ್ಕಿ ನಂಬರ್ ಆಗುತ್ತಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆಗಿರುವ ದರ್ಶನ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅವರು ವಿಚಾರಣಾಧೀನ ಖೈದಿ ಆಗಿದ್ದಾರೆ. ಅವರಿಗೆ 6106 ಖೈದಿ ನಂಬರ್ ನೀಡಲಾಗಿದೆ. ಈ ನಂಬರ್ ಮೇಲೆ ಕೆಲವು ಅಭಿಮಾನಿಗಳಿಗೆ ಆಕರ್ಷಣೆ ಹೆಚ್ಚಿದೆ. ಇದೇ ನಂಬರ್ನಲ್ಲಿ ಹೊಸ ವಾಹನಗಳ ನೋಂದಣಿ ಮಾಡಿಸಿಕೊಳ್ಳಲು ಕೆಲವು ಫ್ಯಾನ್ಸ್ ಮುಂದಾಗಿದ್ದಾರೆ ಎನ್ನಲಾಗಿದೆ.

