Bengaluru 26°C
Ad

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ ಮುಂದೂಡಿಕೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್​ ಹಾಗೂ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್​ ಹಾಗೂ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ದರ್ಶನ್​ ಅವರು ಬೇಲ್​ ಸಲುವಾಗಿ ಅರ್ಜಿ ಸಲ್ಲಿಸಿದ್ದರು. ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್​ 27ಕ್ಕೆ ಮುಂದೂಡಲಾಗಿದೆ.

ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್​ 25ಕ್ಕೆ ಮುಂದೂಡಿಕೆ ಆಗಿದೆ. ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ಕಾಲಾವಕಾಶ ಕೋರಿದ್ದಾರೆ. ಅದಕ್ಕೆ ನ್ಯಾಯಾಲಯ ಅವಕಾಶ ನೀಡಿದೆ. ವಿಚಾರಣೆಯನ್ನು ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಆದೇಶ ನೀಡಿದ್ದಾರೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ16 ಆಗಿರುವ ಕೇಶವಮೂರ್ತಿಗೆ ಜಾಮೀನು ಮಂಜೂರು ಮಾಡಲಾಗಿದೆ. ಹೈಕೋರ್ಟ್​ನಿಂದ ಕೇಶವಮೂರ್ತಿಗೆ ಜಾಮೀನು ನೀಡಲಾಗಿದೆ. ತುಮಕೂರು ಜೈಲಿನಲ್ಲಿರುವ 16ನೇ ಆರೋಪಿ ಕೇಶವಮೂರ್ತಿಗೆ ಸದ್ಯಕ್ಕೆ ರಿಲೀಫ್​ ಸಿಕ್ಕಿದೆ. ಇನ್ನುಳಿದ ಆರೋಪಿಗಳು ಜಾಮೀನು ಪಡೆಯಲು ಯತ್ನಿಸುತ್ತಿದ್ದಾರೆ.

Ad
Ad
Nk Channel Final 21 09 2023