Bengaluru 22°C
Ad

ನಟ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜ‌ರ್ ವಿಷ ಸೇವಿಸಿ ಆತ್ಮಹತ್ಯೆ

Died

ಆನೇಕಲ್‌: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಪೊಲೀಸ್‌ ವಿಚಾರಣೆ ಎದುರಿಸುತ್ತಿರುವ ಹೊತ್ತಿನಲ್ಲಿಯೇ, ದರ್ಶನ್‌ಗೇ ಸಂಬಂಧಿಸಿದ ಇನ್ನೊಂದು ಅನುಮಾನಾಸ್ಪದ ಸಾವು ಬಯಲಿಗೆ ಬಂದಿದೆ.

Ad
300x250 2

ದರ್ಶನ್‌ ಫಾರಂ ಹೌಸ್ ಮ್ಯಾನೇಜರ್‌ ಆಗಿದ್ದ ಶ್ರೀಧರ್‌ ಎಂಬಾತ ಶಂಕಾಸ್ಪದವಾಗಿ ರಕ್ತ ಕಾರಿಕೊಂಡು ಸತ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀಧರ್ (35) ಆತ್ಮಹತ್ಯೆ ಮಾಡಿಕೊಂಡ ಮ್ಯಾನೇಜರ್. ಏಪ್ರಿಲ್ 17ನೇ ತಾರೀಕು ಈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ಘಟನೆ ನಡೆದಿದೆ. ಬಗ್ಗನದೊಡ್ಡಿಯಲ್ಲಿ ನಟ ದರ್ಶನ್‌ಗೆ ಸೇರಿದ ʼದುರ್ಗ ಫಾರ್ಮ್ ಹೌಸ್ʼ ಇದ್ದು, ಅಲ್ಲಿ ಈತ ಮ್ಯಾನೇಜರ್‌ ಆಗಿದ್ದ.

ಎರಡು ತಿಂಗಳ ಹಿಂದೆ ಈ ಆತ್ಮಹತ್ಯೆ ಘಟಿಸಿದ್ದು, ಪೊಲೀಸರು ಅನುಮಾನಾಸ್ಪದ ಸಾವು ದಾಖಲಿಸಿಕೊಂಡಿದ್ದರು.

ಇನ್ನು ಒಂದು ಡೆತ್‌ ನೋಟನ್ನೂ ಶ್ರೀಧರ್‌ ಬರೆದಿಟ್ಟಿದ್ದಾನೆ. ತಾನು ಮಾನಸಿಕ ಖಿನ್ನತೆಗೊಳಗಾಗಿ ಸೂಸೈಡ್ ಮಾಡಿಕೊಳ್ಳುತ್ತಿರುವುದಾಗಿ ಅದರಲ್ಲಿ ಬರೆದಿದ್ದಾನೆ. “ನನ್ನ ಸಾವಿಗೆ ನಾನೇ ಕಾರಣ. ಒಂಟಿತನ ಕಾಡುತ್ತಿದೆ. ಬದುಕಿದ್ದು ಮನೆ ಕಟ್ಟಬೇಕು ಎಂದು ಆಸೆ ಇತ್ತು. ಆಗಲಿಲ್ಲ. ನಾನು ಸತ್ತಮೇಲೆ ನನ್ನ ಗೋರಿ ಆದರೂ ಕಟ್ಟಿ” ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ಡೆತ್‌ನೋಟನ್ನು ಯಾವುದೇ ಚಿತ್ತು ಕಾಟಿಲ್ಲದೆ ಬರೆದು, ಹೆಸರು ಬರೆದು ಸಹಿ ಹಾಕಿ ಜೊತೆಗೆ ಹೆಬ್ಬೆಟ್ಟು ಗುರುತನ್ನೂ ಒತ್ತಿದ್ದಾನೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ಪ್ರಕರಣ ದಾಖಲಾಗಿದೆ.

“ನನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ” ಎಂದು ಮತ್ತೆ ಮತ್ತೆ ಡೆತ್‌ನೋಟ್‌ನಲ್ಲಿ ಶ್ರೀಧರ್‌ ಉಲ್ಲೇಖಿಸಿದ್ದಾನೆ. “ನನ್ನ ಅಮ್ಮ ಅಪ್ಪ ಅಕ್ಕಂದಿರು ಯಾರಾದರೂ ನನ್ನ ಸಾವಿನ ಬಗ್ಗೆ ಅನುಮಾನವಿದೆ ಎಂದು ಕಂಪ್ಲೇಂಟ್‌ ಕೊಟ್ಟರೆ ಅದನ್ನು ತಗೋಬೇಡಿ. ನಾನು ತುಂಬಾ ಯೋಚನೆ ಮಾಡಿ ನನ್ನ ಪ್ರಾಣ ಕಳೆದುಕೊಳ್ತಾ ಇದೇನೆ” ಎಂದು ಬರೆದಿದ್ದಾನೆ. ಇದೇ ಈಗ ಅನುಮಾನಕ್ಕೆ ಕಾರಣವಾಗಿದೆ.

 

Ad
Ad
Nk Channel Final 21 09 2023
Ad