Ad

ದರ್ಶನ್​ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯ; ಮುಂದಿನ ನಡೆಯೇನು ?

Darshan

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್​ಗೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಳ್ಳಲಿದೆ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿಕ್ಕೆ ಸಿದ್ಧತೆ ಮಾಡಲಾಗಿದೆ.

Ad
300x250 2

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್ ಸಂಬಂಧ ನಟ ದರ್ಶನ್​​ ಮೂರು ಬಾರಿ ಪೊಲೀಸ್ ಕಸ್ಟಡಿಯಲ್ಲಿದ್ದರು. ಜೂನ್ 11 ರಂದು ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ದರ್ಶನ್​ರನ್ನು ಅರೆಸ್ಟ್ ಮಾಡಲಾಗಿತ್ತು. ಜೂನ್ 22 ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಇಂದು 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ ಹಿನ್ನಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಿಕ್ಕೆ ಸಿದ್ದತೆ ಮಾಡಲಾಗಿದೆ.

 

Ad
Ad
Nk Channel Final 21 09 2023
Ad