ದೊಡ್ಡಬಳ್ಳಾಪುರ: ನಾಗರೀಕ ಸಮಾಜವೇ ತಲೆ ತಗ್ಗಿಸುವಂತಹ ಕೆಲಸ ನಡೆದಿದೆ. ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು, ಮಗಳಿಂದ ಪೊಲೀಸ್ ಠಾಣೆಗೆ ದೂರು ದಾಖಲಾಗಿರುವ ಘಟನೆ ಹೊಸಕೋಟೆ ನಗರದಲ್ಲಿ ನಡೆದಿದೆ.
19 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಮಂಜುನಾಥ್ ಅತ್ಯಾಚಾರ ಮಾಡಿರುವ ಪಾಪಿ ತಂದೆ ಎಂದು ಗುರುತಿಸಲಾಗಿದೆ. ಮಂಜುನಾಥ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ಮಂಜುನಾಥ್ ಗೆ ಮೂರು ಜನ ಮಕ್ಕಳು, ಎರಡು ಹೆಣ್ಣು, ಒಂದು ಗಂಡು ಮಗು, ಹಿರಿಯ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ. ತಂದೆಯ ಕಾಟ ತಾಳಲಾರದೆ ಪಿಜಿಯಲ್ಲಿ ವಾಸವಾಗಿದ್ದಳು. ವಿಷಯ ತಿಳಿಸಿದರೆ ಕೊಲೆ ಮಾಡುವ ಬೆದರಿಕೆ ಹಾಕಿರುವ ಆರೋಪ ಕೂಡ ಕೇಳಿಬಂದಿದೆ.
ಭಯದಿಂದ ಯುವತಿ ಮನೆಯಿಂದ ದೂರ ಉಳಿದಿದ್ದಾಳೆ. ಮಾ.14ರಂದು ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ತಂದೆಯ ಮೇಲೆ ಮಗಳು ದೂರು ನೀಡಿದ್ದಾಳೆ. ಅಂಬೇಡ್ಕರ್ ಸೇವಾ ಸಮಿತಿ ಸಂಘಟನೆಯ ಸಹಾಯ ಪಡೆದು ಸಂತ್ರಸ್ಥೆ ದೂರು ಸಲ್ಲಿಸಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದು ಮಹಿಳಾ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಂದೆಯಿಂದಾದ ಅನಾಚರಕ್ಕೆ ನ್ಯಾಯಕ್ಕಾಗಿ ಮಗಳು ಆಗ್ರಹಿಸಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪ್ರಕರಣ ದಾಖಲಾಗಿದೆ.

