News Karnataka Kannada
Tuesday, April 23 2024
Cricket
ದಾವಣಗೆರೆ

ರಾಗಿ ಬೆಳೆಗಾರರಿಗೆ ಮುಖ್ಯ ಮಂತ್ರಿಗಳಿಂದ ಶುಭ ಸುದ್ದಿ

Untitled 57
Photo Credit :

ದಾವಣಗೆರೆ  : ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ ರಾಗಿ ಖರೀದಿಸಲಾಗುತ್ತಿದ್ದು, ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಗಿ ಬೆಳೆದ ರೈತರಿಗೆ ಮತ್ತೊಂದು ಶುಭ ಸುದ್ದಿ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ ಎರಡು ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿಸಲಾಗಿದ್ದು, ಇನ್ನೂ ಎರಡು ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲಾಗುವುದು ಎಂದು ತಿಳಿಸಿದರು.

ಬೆಂಬಲ ಬೆಲೆ ಯೋಜನೆಯಡಿ ಹೆಚ್ಚುವರಿ ರಾಗಿಯನ್ನು ಖರೀದಿಸಲು ಕೇಂದ್ರ ಆಹಾರ ಸಚಿವರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಮೂರು ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ರಾಗಿ ಬೆಳೆದಿದ್ದು, ಯಾವುದೇ ಕಾರಣಕ್ಕೂ ರಾಗಿ ಬೆಳೆದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು