News Karnataka Kannada
Monday, April 29 2024
ದಾವಣಗೆರೆ

ಒಂದೇ ಕುಟುಂಬದ 3 ಜನ ಆತ್ಮಹತ್ಯೆಗೆ ಶರಣು

Death Body 08082021
Photo Credit :
ದಾವಣಗೆರೆ:  ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯ ಭರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ 35 ವರ್ಷದ ಕೃಷ್ಣಾ ನಾಯ್ಕ್, ಪತ್ನಿ ಸುಮಾ ಮತ್ತು ಆರು ವರ್ಷದ ಮಗು ಧ್ರುವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ್ದು, ಅವರ ಅಕ್ರಂದನ ಮುಗಿಲು ಮುಟ್ಟಿದೆ.

ಮಗು ಮತ್ತು ತನ್ನ ಪತ್ನಿಗೆ ವಿಷ ಕುಡಿಸಿ ಬಳಿಕ ಕೃಷ್ಣಾ ನಾಯ್ಕ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಎಂಆರ್ ಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೃಷ್ಣಾ ನಾಯ್ಕ್​ ಖಾಸಗಿ ಫ್ಯಾಕ್ಟರಿಯಲ್ಲಿ ಲಾರಿ ಚಾಲಕನಾಗಿದ್ದ. ನಾಲ್ಕು ತಿಂಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಕುಟುಂಬ ಆರ್ಥಿಕ ಸಂಕಷ್ಟದಲ್ಲಿತ್ತು. ಇದಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ಮೂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು