ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿಗೆ ಶಾಲಾ ವಾಹನ ಡಿಕ್ಕಿ ಆದ ದುರ್ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೇಹಳ್ಳಿ ಕ್ರಾಸ್ ಬಳಿ ಸಂಭವಿಸಿದೆ.
ಶಾಲಾ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ. ಮಕ್ಕಳನ್ನು ಶಾಲೆಯಿಂದ ವಾಪಸ್ ಕರೆದೊಯ್ಯುವಾಗ ಘಟನೆ ನಡೆದಿದೆ. ಗಾಯಾಳು ಮಕ್ಕಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.