News Karnataka Kannada
Sunday, May 05 2024
ದಾವಣಗೆರೆ

ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ; ಬಿ.ಎಸ್.ಯಡಿಯೂರಪ್ಪ

Bsy 27082021
Photo Credit :

ದಾವಣಗೆರೆ: ವಿಧಾನಪರಿಷತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಪ್ರಕಟಿಸುವುದಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಜೆಡಿಎಸ್ ಜೊತೆ ಹೊಂದಾಣಿಕೆ ಬಗ್ಗೆ ಇಷ್ಟರಲ್ಲಿಯೇ ಮಾತನಾಡುತ್ತೇವೆ.ಪರಸ್ಪರ ಸಹಕಾರ ನೀಡುವಂತೆ ಜೆಡಿಎಸ್ ಬಳಿ ಕೇಳುತ್ತೇವೆ ಎಂದು ಹೇಳುವ ಮೂಲಕ ಜೆಡಿಎಸ್ ಜೊತೆ ಹೊಂದಾಣಿಕೆ ಸುಳಿವು ನೀಡಿದ್ದಾರೆ.

ಪರಿಷತ್ ಚುನಾವಣೆಯಿಂದ ಎರಡನೇ ಸುತ್ತಿನ ಪ್ರಚಾರ ಆರಂಭವಾಗಿದೆ. ರಾಜ್ಯದಲ್ಲಿ ಕೇವಲ 20 ಸೀಟ್ ಗಳಿಗೆ ನಿಶ್ಚಿತವಾಗಿ ಸ್ಪರ್ಧೆ ಮಾಡುತ್ತೇವೆ. ಇದರಲ್ಲಿ 15 ಸೀಟ್ ಗೆದ್ದೇ ಗೆಲ್ಲುತ್ತೇವೆ. ಬಿಜೆಪಿ ಪರವಾದ ವಾತಾವರಣ ಎಲ್ಲೆಡೆ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ದಯನೀಯ ಸ್ಥಿತಿಯಲ್ಲಿದೆ. ಎಲ್ಲರೂ ಬಿಜೆಪಿಗೆ ಬೆಂಬಲ ನೀಡಿ ಪರಿಷತ್ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವಂತೆ ಮಾಡಬೇಕು ಎಂದು ಕರೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು