ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಕಾನನಕಟ್ಟೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದಾರೆ. .ಡಿವೈಡರ್ ಗೆ ಇನೋವಾ ಕಾರ್ ಡಿಕ್ಕಿಯಾಗಿ ಭೀಕರ ದುರಂತ ಸಂಭವಿಸಿದೆ.
ಕಾನನಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಕಾರ್ ನಲ್ಲಿದ್ದ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.